ಪುತ್ತೂರು ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

Share with

ಪುತ್ತೂರು: ಹತ್ತೂರ ಒಡೆಯ ಮಹಾಲಿಂಗೇಶ್ವರನ `ವಾರ್ಷಿಕ ಜಾತ್ರೋತ್ಸವ ಎಪ್ರಿಲ್ 10 ರಿಂದ ಪ್ರಾರಂಭಗೊಳ್ಳಲಿದೆ. ದೇವಸ್ಥಾನದ 10 ದಿನಗಳ ಕಾಲ ನಡೆಯಲಿರುವ ಈ ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ವ್ಯವಸ್ಥಾಪನಾ ಸಮಿತಿಯಿಂದ ನಿರ್ಧಾರ ಮಾಡಲಾಗಿದೆ.

ಎಪ್ರಿಲ್ 10 ರಿಂದ 20 ರ ತನಕ ಈ ಜಾತ್ರೆ ನಡೆಯಲಿದ್ದು, ಈ ಬಾರಿಯೂ ಅನ್ಯಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲು ನಿರ್ಧರಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎನ್ನುವ ಮನವಿ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಬಹುತೇಕ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ಆ ಸಂದರ್ಭದಲ್ಲಿ ಕಾಂಗ್ರೇಸ್ ವಿರೋಧಿಸಿತ್ತು. ಇದೀಗ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅನ್ಯಮತೀಯರ ವ್ಯಾಪಾರದ ನಿಷೇಧ ಈ ಬಾರಿಯೂ ಮುಂದುವರಿಸಿದ್ದಾರೆ.


Share with

Leave a Reply

Your email address will not be published. Required fields are marked *