ಉಡುಪಿ: ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಖಾಸಗಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಚರಣ್ ಶೆಟ್ಟಿ, ಬಿಜೆಪಿಯ ಹಿರಿಯ ಕಾರ್ಯಕರ್ತ ವಿಶ್ವನಾಥ್ ಭಟ್, ಕೊಡಗು ಜಿಲ್ಲೆಯ ಮುಖಂಡರಾದ ಚೇತನ್ ಮಂದಣ್ಣ, ಶಿವಮೊಗ್ಗದ ಎಂ. ಶಂಕರ್ ಉಪಸ್ಥಿತರಿದ್ದರು.
ರಘುಪತಿ ಭಟ್ ಅವರು ನೂರಾರು ಮಂದಿ ಹಿತೈಷಿಗಳೊಂದಿಗೆ ತೆರಳಿ ನಾಮ ಪತ್ರ ಸಲ್ಲಿಸಿದರು.