ಮಂಗಳೂರು: ಧರ್ಮಸ್ಥಳ ಗ್ರಾಮದ ತಲೆಬುರುಡೆ ಪ್ರಕರಣ ಸೇರಿ ವಿವಿಧ ಆರೋಪಗಳಿಗೆ ಸಂಬಂಧಿಸಿ ವಿಶೇಷ ತನಿಖಾ ದಳ (ಎಸ್ ಐಟಿ) ತನಿಖೆ ತೀವ್ರ ಗೊಳಿಸಿದ್ದು, ಯೂಟ್ಯೂಬರ್ ಗಳಿಗೆ ನೋಟಿಸ್ ನೀಡಿ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಯೂಟ್ಯೂಬರ್ ಗಳಾದ ಎಂ.ಡಿ.ಸಮೀರ್, ಮುನಾಫ್, ಅಭಿಷೇಕ್ ಸೇರಿ ಕೆಲವರಿಗೆ ಎಸ್ ಐಟಿ ಅಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ನಾಳೆ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ
ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣ ಜಾಮೀನು ಅರ್ಜಿಯನ್ನು ನಾಳೆ (ಅಕ್ಟೋಬರ್4) ಮಂಗಳೂರಿನ ಪ್ರಧಾನ ಮತ್ತು ಸತ್ರ ನ್ಯಾಯಾಲಯ ನಿರ್ಧರಿಸಲಿದೆ.




