ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ದನ ಕಳ್ಳನ ಬಂಧನ

Share with

ಮಂಗಳೂರು:ನಿಷೇದಿತ ಮಾದಕ ವಸ್ತುಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ(ಜುಲೈ 3) ಬಂಧಿಸಿದ್ದಾರೆ.

ಬಂಧಿತ ಆರೋಪಿ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್(36) ಎಂಬಾತನಾಗಿದ್ದುಕಸಬಾ ಬೆಂಗ್ರೆ ಮೂಲದವನಾಗಿದ್ದು ಕೊಣಾಜೆ ಆಸೈಗೋಳಿ ಯಲ್ಲಿ ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿಗೆ ಬೆಂಗಳೂರು ಮತ್ತು ಮುಂಬೈಯಿಂದ ಎಂಡಿಎಂಎ ತರಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಿಳಿ ಬಣ್ಣದ ಕಾರಿನಲ್ಲಿ ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ 1,20,000 ಮೌಲ್ಯದ 12.05 ಗ್ರಾಂ ಮಾದಕ vasth ಸಹಿತ ಬಂಧಿಸಿದ್ದಾರೆ.

ಕಾರು ಸಹಿತ 4,31,250 ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಬೀ‌ರ್ ವಿರುದ್ಧ ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಪೂರ್ವ, ಕಂಕನಾಡಿ ನಗರ, ಉಳ್ಳಾಲ, ಬಜ್ಜೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆ, ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಗಳಲ್ಲಿ 15 ಕ್ಕಿಂತ ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿಗಳು ಪಾಲ್ಗೊಂಡಿದ್ದರು.


Share with

Leave a Reply

Your email address will not be published. Required fields are marked *