ಹೊಟ್ಟೆನೋವು ತಾಳಲಾರದೆ ಆತ್ಮಹತ್ಯೆಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿನಿ

Share with

ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಈ ಘಟನೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ನಡೆದಿದೆ. ಪ್ರಿಯಾಂಕ ಮೃತ ಯುವತಿ. ಅಂತಿಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ, ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು.

ಇದೇ ಕಾರಣಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಈ ಕುರಿತು ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.


Share with

Leave a Reply

Your email address will not be published. Required fields are marked *