ಬೆಳ್ತಂಗಡಿ : ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆದು ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದ ಯುವತಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಆ.13 ರಂದು ನಡೆದಿದೆ.
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿ ಪುತ್ರಿ ಸುಮಾ (19) ಮೃತಪಟ್ಟವರು.
ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ವಿದ್ಯಾರ್ಥಿನಿ ಸುಮಾರವರು ಆ. 9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಮಾತ್ರೆಗಳನ್ನು ಪಡೆದು ಮನೆಗೆ ತೆರಳಿದ್ದಳು. ಬಳಿಕ ಆ.11 ರಂದು ಮತ್ತೆ ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿ ಬಳಿಕ ಬಳ್ಳಮಂಜದಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದಾರೆ. ಆ.13 ರಂದು ಸಂಜೆ ಸಮನಾರವರು ಅಸ್ವಸ್ಥಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಲೋ ಬಿಪಿ ಉಂಟಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.