ಬೆಂಗಳೂರು: ಬಿಜೆಪಿ ಟಿಕೆಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಚೈತ್ರಾ ಸುದ್ದಿ ಜೊತೆಯಲ್ಲಿ ಕುಂದಾಪುರ ಹೆಸರು ಬಳಸದಂತೆ ನಿರ್ಬಂಧ ಹೇರುವಂತೆ ಕೋರಿ ನಗರದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವ್ಯಕ್ತಿಯೊಬ್ಬರು ದಾವೆ ಹೂಡಿದ್ದಾರೆ.
ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣವನ್ನು ಪಡೆದು ವಂಚಿಸಿರುವ ಆರೋಪದ ಮೇರೆಗೆ ಬಂಧನಕ್ಕೆ ಒಳಗಾಗಿರುವ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖ ಮಾಡಲಾಗುತ್ತಿತ್ತು. ಈ ಬಗ್ಗೆ ಅಸಮಾಧಾನವನ್ನು ಹೊಂದಿದ್ದ ಕುಂದಾಪುರ ಮೂಲದ ವ್ಯಕ್ತಿಯೊಬ್ಬರು ದಾವೆಯನ್ನು ಹೂಡಿದ್ದು, ದಾವೆಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ ಎಂದು ವರದಿಯಾಗಿದೆ.