ಕರಾವಳಿಯಲ್ಲಿ ಭಾರೀ ಮಳೆಯ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Share with

ಮಂಗಳೂರು : ಕರಾವಳಿ ಭಾಗದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 30ರವರೆಗೆ ಈ ಭಾಗಗಳಲ್ಲಿ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.


ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರಾವಳಿ ಭಾಗದಲ್ಲಿ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 40–50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ಪ್ರಮಾಣದ ಭೂಕುಸಿತ ಸಂಭವಿಸುವ ಸಾಧ್ಯತೆಯೂ ಇದೆ. ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದ್ದು, ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಲು, ನದಿ ಹಾಗೂ ಹೊಳೆಗಳ ಸಮೀಪ ಎಚ್ಚರಿಕೆಯಿಂದ ಇರಲು ಮತ್ತು ಮರಗಳ ಕೆಳಗೆ ವಾಹನಗಳನ್ನು ನಿಲ್ಲಿಸದಂತೆ ಮನವಿ ಮಾಡಲಾಗಿದೆ.


ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಮತ್ತು ಬಲವಾದ ಗಾಳಿಯ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


Share with

Leave a Reply

Your email address will not be published. Required fields are marked *