ಮಹಾರಾಷ್ಟ್ರ: ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದೆ. ಪಶ್ಚಿಮ ಮಹಾರಾಷ್ಟ್ರ, ಕೊಂಕಣ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶಗಳನ್ನು ಹೊರತುಪಡಿಸಿ, ಇತರೆಡೆ ಹವಾಮಾನವು ಸಾಮಾನ್ಯವಾಗಿದೆ ಎಂದು ನಿರೀಕ್ಷಿಸಲಾಗಿದೆ. ಪ್ರಮುಖ ವಿಷಯವೆಂದರೆ ಮುಂದಿನ 24 ಗಂಟೆಗಳಲ್ಲಿ ಪುಣೆ ನಗರ ಮತ್ತು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಮುಂಬೈನ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಪುಣೆ, ಸತಾರಾ ಜಿಲ್ಲೆಯಲ್ಲಿ ಭಾರೀ ಮಳೆಯ ಎಚ್ಚರಿಕೆ:
ಕಳೆದ ಕೆಲವು ದಿನಗಳಿಂದ ಪುಣೆ ನಗರ ಮತ್ತು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಸೋಮವಾರವೂ (ಆ.5) ನಗರ ಮತ್ತು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಮುಂಬೈ ನಗರ, ಮುಂಬೈ ಉಪನಗರಗಳು, ಥಾಣೆ ಪಾಲ್ಘರ್ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಮುಂಬೈನಲ್ಲಿ ಗಾಳಿಯ ವೇಗವೂ ಹೆಚ್ಚಾಗುವ ಮುನ್ಸೂಚನೆ ಇದೆ.
ಮುಂಬೈ: ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್