ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್; ನಾಳೆ(೦1) ಶಾಲಾ– ಕಾಲೇಜುಗಳಿಗೆ ರಜೆ ಘೋಷಣೆ

Share with


ಕಾಸರಗೋಡು: ಜಿಲ್ಲೆಯಲ್ಲಿ ಇಂದು (30-06-2026) ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ (Orange Alert) ಎಚ್ಚರಿಕೆ ನೀಡಿರುವುದರಿಂದ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ (01-07-2026) ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿಗಳು, ಶಾಲಾ– ಕಾಲೇಜುಗಳು, ಸಿಬಿಎಸ್‌ಇ ಶಾಲೆಗಳು, ಐಸಿಎಸ್‌ಇ ಶಾಲೆಗಳು,ಟ್ಯೂಷನ್ ಕೇಂದ್ರಗಳು
ಮದರಸಾಗಳಿಗೆ ರಜೆ ಘೋಷಿಸಲಾಗಿದೆ.

ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ಮತ್ತು ಸಂದರ್ಶನಗಳು ನಿಗದಿತ ವೇಳಾಪಟ್ಟಿಯಂತೆ ನಡೆಯುತ್ತವೆ. ಮುಂಚಿತವಾಗಿ ನಿಗದಿಪಡಿಸಿರುವ ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಂದರ್ಶನಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಕಾಸರಗೋಡು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *