ಬೃಹತ್ ರಕ್ತದಾನ ಶಿಬಿರ ಆಯೋಜನೆ

Share with



ಸಕಲೇಶಪುರ: ಅಯೋಧ್ಯೆ ಬಾಲರಾಮ ದಿವಸ್ ನಿಮಿತ್ತ ಸಕಲೇಶಪುರದಲ್ಲಿ ನವೆಂಬರ್ 2ರಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಪುರೆಭವನ ಸಕಲೇಶಪುರದಲ್ಲಿ ಬೆಳಿಗ್ಗೆ 7.30ರಿಂದ ರಕ್ತದಾನ ಶಿಬಿರ ನಡೆಯಲಿದ್ದು, ರಕ್ತದಾನ ಮಹಾದಾನ ಎಂಬ ಸಂದೇಶದೊಂದಿಗೆ ಸಾರ್ವಜನಿಕರಲ್ಲಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ. ರಕ್ತದಾನವು ಅಮೂಲ್ಯವಾದ ಜೀವಗಳನ್ನು ಉಳಿಸಲು ನೆರವಾಗುವ ಮಹತ್ವದ ಸೇವೆಯಾಗಿದ್ದು, ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ನೆರವಾಗಲು ಪ್ರತಿಯೊಬ್ಬರೂ ಮುಂದೆ ಬರಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ಯುವಕರು ಹಾಗೂ ರಕ್ತದಾನ ಮಾಡಲು ಅರ್ಹರಾಗಿರುವ ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.


Share with

Tags:

Leave a Reply

Your email address will not be published. Required fields are marked *