ಬೆಳಗಾವಿ: ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಘಟನೆ ಬುಧವಾರ ನಡೆದಿದೆ.
ನಟೋರಿಯಸ್ ಪಾತತಿ ಪುತ್ತೂರು ಮೂಲದ ಜಯೇಶ್ ಪೂಜಾರಿ ಘೋಷಣೆ ಕೂಗಿದ ವ್ಯಕ್ತಿಯಾಗಿದ್ದಾನೆ. ಕೋರ್ಟ್ ಒಳ ಭಾಗದಲ್ಲೇ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ.
ಆಕ್ರೋಶಗೊಂಡು ಥಳಿಸುತ್ತಿದ್ದಂತೆ ಪೊಲೀಸರು ಆರೋಪಿಯನ್ನು ರಕ್ಷಣೆ ಮಾಡಿ ಹೊರ ಕರೆದುಕೊಂಡು ಬಂದು, ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಜೀವ ಬೆದರಿಕೆ ಹಾಕಿದ್ದ ಕೇಸ್ ವಿಚಾರಣೆಗಾಗಿ ಜಯೇಶ್ ಪೂಜಾರಿಯನ್ನು ಕೋರ್ಟ್ ಗೆ ಕರೆತರಲಾಗಿತ್ತು. ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೂ 100 ಕೋಟಿ ರೂ. ಬೇಡಿಕೆ ಇಟ್ಟು ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ.