ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಚಾರಿಪಲ್ಕೆ, ಪಂಜಿಕಲ್ಲು ಇದರ ನೂತನ ಕೊಠಡಿಯನ್ನು ಉದ್ಘಾಟನೆ

Share with

ಪಂಜಿಕಲ್ಲು ಆಚಾರಿಪಲ್ಕೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಇಟ್ಟಿರುವ ಇಂಗ್ಲಿಷ್ ಮಾಧ್ಯಮದ ಬೇಡಿಕೆಯನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ರೂ 13.90 ಲಕ್ಷ ಅನುದಾನದಲ್ಲಿ ವಿವೇಕಶಾಲಾ ಕೊಠಡಿ ಯೋಜನೆಯಡಿ ಮಂಜೂರಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಚಾರಿಪಲ್ಕೆ, ಪಂಜಿಕಲ್ಲು ಇದರ ನೂತನ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ವಿವೇಕಶಾಲಾ ಕೊಠಡಿ ಯೋಜನೆಯಡಿ ಅತೀ ಹೆಚ್ಚು ಅನುದಾನಗಳನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ನೀಡಲಾಗಿದೆ.
ಗ್ರಾಮೀಣ ಭಾಗದ ಪ್ರತಿಯೊಂದು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿರುವ ಶಾಲೆಗಳಿಗೆ ಸರಕಾರದಿಂದ ಸಿಗುವ ಅನುದಾನವನ್ನು ಆದ್ಯತೆ ನೆಲೆಯಲ್ಲಿ ಒದಗಿಸುವ ಭರವಸೆ ‌ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ,ಪಂಜಿಕಲ್ಲು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರಸಾದ್,ಪಂಚಾಯತ್ ಸದಸ್ಯರುಗಳಾದ ಸಂಜೀವ ಪೂಜಾರಿ ಪಿಲಿಂಗಾಲ್,ಲಕ್ಷ್ಮಿ ನಾರಾಯಣ ಗೌಡ,ಜಯಶ್ರೀ ಪಟ್ರಾಡಿ, ಮಾಜಿ ಪಂಚಾಯತ್ ಸದಸ್ಯರಾದ ಕೃಷ್ಣರಾಜ್ ಜೈನ್,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸುಪ್ರೀತಾ,ಉಪಾಧ್ಯಕ್ಷರಾದ ಮೋನಪ್ಪ ಗೌಡ ಉಪಸ್ಥಿತರಿದ್ದರು.
ಸ್ವಾಗತ ಮರ್ಸಿನ್ ಮೆಥಿ ಪಾಯಸ್ ಸ್ವಾಗತಿಸಿ, ಜಯಶ್ರೀ ಧನ್ಯವಾದ ನೀಡಿದರು. ಲಿಖಿತ ಕಾರ್ಯಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *