ಪ್ಯಾರಾಮೆಡಿಕಲ್ ಪ್ರಶ್ನೆ ಪತ್ರಿಕೆ ಲೀಕ್ ..! ನಾಲ್ವರು ಅರೆಸ್ಟ್

Share with

ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಜುನ್ಜುನುವಿನ ಎಸ್ ಕರಣ್ ಕಾಲೇಜಿನ ಪ್ಯಾರಾಮೆಡಿಕಲ್ ವಿಭಾಗದ ಮುಖ್ಯಸ್ಥ ಕೃಷ್ಣ ಕುಮಾರ್ ಸೈನಿ, ಎಸ್ ಕರಣ್ ಕಾಲೇಜಿನ ರೇಡಿಯಾಲಜಿ ವಿಭಾಗದ ಉಪನ್ಯಾಸಕ ಶಂಕರ್ ಲಾಲ್ ಜಾಟ್, ಪ್ರಭಾ ಮೆಮೋರಿಯಲ್ ಪಿಜಿ ಕಾಲೇಜಿನೊಂದಿಗೆ ಸಂಬಂಧ ಹೊಂದಿರುವ ರಾಮಕೃಷ್ಣ ಮಂಡಿವಾಲ್ ಮತ್ತು ಕಾಲೇಜಿನ ಆಡಳಿತಾಧಿಕಾರಿ ದೇವಕೃಷ್ಣ ಮಂಡಿವಾಲ್ ಬಂಧಿತರು.

ಜೈಪುರದ ಪ್ರಭಾ ದೇವಿ ಮೆಮೋರಿಯಲ್ ಪಿಜಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಲು ಆರೋಪಿಗಳು ಸುಮಾರು 40-45 ಅಭ್ಯರ್ಥಿಗಳಿಂದ ಭಾರಿ ಮೊತ್ತದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಆಕ್ರೋಶ
ಈ ಘಟನೆ ಬಳಿಕ ಪರೀಕ್ಷೆ ರದ್ದಾಗಿದ್ದು, ವಿದ್ಯಾರ್ಥಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಾಲೇಜಿನ ಪೀಠೋಪಕರಣಗಳು ಹಾಗೂ ಪ್ರಶ್ನೆ ಪತ್ರಿಕೆಗಳನ್ನು ಎಸೆದು ಪ್ರತಿಭಟಿಸಿದ್ದಾರೆ.


Share with

Leave a Reply

Your email address will not be published. Required fields are marked *