ಮಣಿಪಾಲ ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಪಾಲುದಾರ ಆತ್ಮಹ*ತ್ಯೆ

Share with

ಉಡುಪಿ: ಮಣಿಪಾಲ ಈಶ್ವನಗರದ ಡೌನ್ ಟೌನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಪಾಲುದಾರ ಕಾರ್ಕಳ ಬೈಲೂರಿನ ನಿವಾಸಿ ಕೃಷ್ಣರಾಜ್ ಹೆಗ್ಡೆ (45)ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ರಾಡಿಯ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿ-ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಇವರು, ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ.

ಬೈಲೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಮುಂಚೂಣಿಯಲ್ಲಿ ಸಕ್ರಿಯರಾಗಿದ್ದರು. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *