ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಮತ್ತು ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ನನ್ನು ಪಾಕಿಸ್ತಾನದ ಸಿಯಾಲ್ಕೋಟ್ ನಲ್ಲಿ ಬುಧವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ.
ಶಾಹಿದ್ ಲತೀಫ್ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನ ಪ್ರಮುಖ ಸದಸ್ಯನಾಗಿದ್ದನು. ಲತೀಫ್ ನನ್ನು ಭಾರತ ಸರ್ಕಾರವು ಭಯೋತ್ಪಾದಕ ಎಂದು ಪಟ್ಟಿ ಮಾಡಿದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು ಕಾಯ್ದೆ ಅಡಿಯಲ್ಲಿ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಬೇಕಾಗಿದ್ದ.
2010 ರಲ್ಲಿ ಬಿಡುಗಡೆಯಾದ ನಂತರ ಲತೀಫ್ ಪಾಕಿಸ್ತಾನದ ಜಿಹಾದಿ ಕಾರ್ಖಾನೆಗೆ ಹಿಂತಿರುಗಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ತನಿಖೆ ಹೇಳುತ್ತದೆ. ಭಾರತ ಸರ್ಕಾರದಿಂದ ಆತನನ್ನು ಮೋಸ್ಟ್ ವಾಂಟೆಡ್ ಭಯೋತ್ಪಾದಕ ಎಂದು ಪಟ್ಟಿ ಮಾಡಲಾಗಿತ್ತು.