ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿ ಸಾವು

Share with

ಕಾರು ಡಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳ: ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.

ಮೃತ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಎಂಬುವವರ ಪುತ್ರಿ ಪಾವನ(23) ಎಂದು ಗುರುತಿಸಲಾಗಿದೆ.

ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಈಕೆ ಕೆಲಸ ಬಿಟ್ಟು ಬಸ್ ಮೂಲಕ ಬಂದು ದಾಸಕೋಡಿ ಎಂಬಲ್ಲಿ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು ತುಸು ದೂರದ ತನಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕಾರು ಕೂಡ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ ಎಂದು ತಿಳಿದು ಬಂದಿದೆ.

ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *