ಹಳೆಯಂಗಡಿ: ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ಅಂಗಡಿಮಾರ್ ಕೃಷ್ಣ ಭಟ್ (103) ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.


ಕೃಷ್ಣ ಭಟ್ ಅವರು ಹಿರಿಯ ವಿದ್ವಾಂಸರಾಗಿದ್ದು, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃ ಆಗಿದ್ದರು. ಇವರು ಮಕ್ಕಳನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಇವರ ಸಾಧನೆಗಾಗಿ ಕೃಷ್ಣಾನುಗ್ರಹ ಪ್ರಶಸ್ತಿ, ಕಲ್ಕೂರ ಪ್ರತಿಷ್ಠಾನದಿಂದ ನೀಡಲಾದ ಪೇಜಾವರ ಶ್ರೀ ಜೀವಮಾನ ಪ್ರಶಸ್ತಿ, ಬ್ರಾಹ್ಮಣರ ಸಮ್ಮೇಳನದ ಗೌರವ ಪುರಸ್ಕಾರ ಸಹಿತ ಅನೇಕ ಗೌರವಗಳು ಲಭಿಸಿವೆ.




