ಏಪ್ರಿಲ್ 1ರಿಂದ ಜನರ ಜೀವನ ದುಬಾರಿ

Share with

ನಾಳೆ ಹೊಸ ಆರ್ಥಿಕ ವರ್ಷದ ಆರಂಭ. ನಾಳೆಯಿಂದ ಜನರ ಜೀವನವೂ ದುಬಾರಿಯಾಗಲಿದೆ. ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ.

ಈ ಮೂಲಕ ಗ್ರಾಹಕರಿಗೆ ದರ ಏರಿಕೆಯ ನೇರ ಪರಿಣಾಮ ಬೀರಲಿದೆ. ರಾಜ್ಯದ ಟೋಲ್ ಪ್ಲಾಜಾಗಳಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಲಿದೆ. ಮತ್ತೊಂದೆಡೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಏ.1ರಿಂದ ಅನ್ವಯವಾಗುವಂತೆ ನೀರಿನ ದರವನ್ನು ಶೇ.3ರಷ್ಟು ಹೆಚ್ಚಳ ಮಾಡಲಿದೆ.


Share with

Leave a Reply

Your email address will not be published. Required fields are marked *