
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಕೋಳಿ ಸಾಗಾಟದ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿಕೊಂಡಿದ್ದಾರೆ. ಕೂರೇಲು ಸಮೀಪದ ಅಂಗಡಿಯ ಬಳಿಯ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆ. ಘಟನೆಯಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್‌ನಲ್ಲಿ ಕೋಳಿಗಳಿದ್ದು ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದರು. ಪಿಕಪ್ ವಾಹನವನ್ನು ತೆರವು ಮಾಡದೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು. ವಿಟ್ಲ ಫ್ರೆಂಡ್ಸ್ ಟೀಮ್ ಕೊನೆಗೂ ಕ್ರೇನ್ ಮೂಲಕ ಪಿಕಪ್ ತೆರವು ಮಾಡಿ ಮಹಿಳೆಯನ್ನು ಹೊರತೆಗೆದಿದ್ದಾರೆ. ಮಹಿಳೆಯ ಸೊಂಟಕ್ಕೆ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಆಗಮಿಸಿದೆ. ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಹಲವು ಮಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.