ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಭೇಟಿ ನೀಡಿದ್ದಾರೆ.

ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, ಬಳಿಕ ಘಟನಾ ಸ್ಥಳಕ್ಕೆ (ಮೇಘನಿನಗರ) ಕಾರಿನಲ್ಲಿ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಇದ್ದರು.




