ಹಾಸ್ಟೆಲ್‌ಗೆ ಅಪ್ಪಳಿಸಿದ ವಿಮಾನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವು?

Share with

ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾದ AI171 ವಿಮಾನವು ಅಹಮದಾಬಾದ್‌ನ BJ ಮೇಡಿಕಲ್ ಕಾಲೇಜಿಗೆ ಅಪ್ಪಳಿಸಿ, ಪತನಗೊಂಡಿದೆ. ಕಾಲೇಜು ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದ್ದು, 20ಕ್ಕೂ ಅಧಿಕ ಮೇಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪರಿಣಾಮ ಹಾಸ್ಟೆಲ್‌ನಲ್ಲಿ ಊಟ ಮಾಡುತ್ತಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ವಿಮಾನ ದುರಂತದಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Share with