ನವದೆಹಲಿ: ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

Share with

ನವದೆಹಲಿ: ದೇಶದಾದ್ಯಂದ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಂತೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸಂಸತ್ ಭವನ ಸೇರಿದಂತೆ ಸರ್ಕಾರಿ ಕಟ್ಟಡಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

75ನೇ ಗಣರಾಜ್ಯೋತ್ಸವದ ಸುಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ಕೋರಿದ್ದಾರೆ.

ಗಣರಾಜ್ಯೋತ್ಸವವು ಜ.26, 1950ರಂದು ಭಾರತದ ಸಂವಿಧಾನದ ಅಂಗೀಕಾರವನ್ನು ನೆನಪಿಸುತ್ತದೆ. ಭಾರತವು 1947ರಲ್ಲಿ ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಪಡೆದ ನಂತರ ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜ.26, 1950ರಂದು, ಈ ಸುಸಂದರ್ಭವನ್ನು ಗಣರಾಜ್ಯ ಎಂದು ಘೋಷಿಸಿ ಅಂದಿನಿಂದ ಜ.26ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. 75ನೇ ಗಣರಾಜ್ಯೋತ್ಸವದ ಸುಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ದೇಶದ ಎಲ್ಲಾ ಜನತೆಗೂ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್ ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪೋಸ್ಟ್ ಮಾಡಿ, ದೇಶದ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳು. ಈ ಐತಿಹಾಸಿಕ ಸಂದರ್ಭದಲ್ಲಿ, ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ, ಜೈ ಹಿಂದ್ ಎಂದು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *