ಮಂಗಳೂರು: ನಿಷೇಧಿತ ಮಾದಕ ಪದಾರ್ಥ ಹೊಂದಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಕಾಲೇಜು ಪದವಿ ವಿದ್ಯಾರ್ಥಿಯಾಗಿರುವ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಲುಕುಮಾನುಲ್ ಹಕೀಂ (22) ಬಂಧಿತ ಆರೋಪಿಯಾಗಿದ್ದು, ಈತನಿಂದ 1 ಲಕ್ಷ 25 ಸಾವಿರ ಮೌಲ್ಯದ ಎಂ.ಡಿ.ಎಂ.ಎ ಯನ್ನು ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಇತರ ವಸ್ತುಗಳಾದ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1 ಲಕ್ಷ 60 ಸಾವಿರ ಮೌಲ್ಯದ ವಸ್ತುಗಳನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಯ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.