ಪೊಲೀಸರ ಎಡವಟ್ಟು: ಮೂರು ವರ್ಷದ ಮಗು ಸ್ಥಳದಲ್ಲೇ ಸಾವು!

Share with

ಪೊಲೀಸರ ಯಡವಟ್ಟಿನಿಂದ 3 ವರ್ಷದ ಮಗು ತಾಯಿ ಮಡಿಲಲ್ಲೇ ಪ್ರಾಣಬಿಟ್ಟ ದಾರುಣ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ.

ಮೃತ ಬಾಲಕಿ ಮದ್ದೂರು ತಾಲೂಕಿನ ಗೊರವನಹಳ್ಳಿಯ ವಾಣಿ-ಅಶೋಕ್ ದಂಪತಿಯ ಪುತ್ರಿ ಹೃತೀಕ್ಷಾ ಎಂದು ಗುರುತಿಸಲಾಗಿದೆ.

ಬಾಲಕಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಪೊಲೀಸರು, ಹೆದ್ದಾರಿಯಲ್ಲಿ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದಾರೆ. ಬೈಕ್ ನಿಯಂತ್ರಣ ತಪ್ಪಿ ಬಿದ್ದು, ತೀವ್ರ ರಕ್ತಸ್ರಾವದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.


Share with