ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ

Share with

ಮಂಗಳೂರು : ಮಂಗಳೂರು ನಗರದಲ್ಲಿ ಪೊಲೀಸ್ ಸೇವೆಯಲ್ಲಿದ್ದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸವದತ್ತಿಯ ಮಹೇಶ್ (೩೧) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಸಿಬಂದಿಯಾಗಿದ್ದು, ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. 

ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದ್ದು ಕಪಿತಾನಿಯೊ ಬಳಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *