ಕರ್ತವ್ಯದ ವೇಳೆ ಅಸ್ವಸ್ಥಗೊಂಡಿದ್ದ ಪೊಲೀಸ್ ಕಾನ್ಸ್ಟೇಬಲ್ ವಿಧಿವಶ

Share with

ಉಡುಪಿ: ಬಂದೋಬಸ್ತ್ ಕರ್ತವ್ಯ ನಿರ್ವಹಣೆ ವೇಳೆ ಅಸ್ವಸ್ಥರಾಗಿದ್ದ ಪೊಲೀಸ್ ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ವಿಜಯ ಕುಮಾರ್ ನಾಯ್ಕ ಜಿ. (41) ಮೃತಪಟ್ಟವರು.

ನ. 26ರಂದು ಬಂದೋಬಸ್ತ್ ಕರ್ತವ್ಯಕ್ಕೆಂದು ಉಡುಪಿಗೆ ಬಂದಿದ್ದರು. ನ. 27ರಂದು ಉಡುಪಿಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ವಾಂತಿ ಮಾಡಿಕೊಂಡಿದ್ದರು. ಜತೆಗೆ ಉಸಿರಾಟದ ಸಮಸ್ಯೆಯೂ ಕಂಡುಬಂದಿದ್ದು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ನ. 29ರಂದು ಕೊನೆಯುಸಿರೆಳೆದ್ದಾರೆ. ಯಾವುದೋ ದೈಹಿಕ ಅನಾರೋಗ್ಯದಿಂದಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *