ಮಂಗಳೂರು: ಪೊಲೀಸ್ ಸಿಬ್ಬಂದಿಯೊಬ್ಬರಿಂದ ಅತ್ಯಾಚಾರ ಆರೋಪದ ಬಗ್ಗೆ ಮಹಿಳೆಯೋರ್ವರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿದ್ದ ಚಂದ್ರ ನಾಯಕ್ ಎಂಬ ಆರೋಪಿಯನ್ನು ಮಂಗಳೂರು ಕಂಕನಾಡಿ ಪೊಲೀಸರು ಬುಧವಾರ (ಜು.16) ಬಂಧಿಸಿದ್ದಾರೆ.
ಮಹಿಳೆಯೊಬ್ಬರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.