ಜನಪ್ರಿಯ ಗಾಯಕಿ ಪಿ.ಸುಶೀಲಾ ಅಸ್ವಸ್ಥರಾಗಿದ್ದಾರೆ. ಅವರನ್ನು ಕೂಡಲೇ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ, ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ತೆಲುಗಿನಲ್ಲಿ ಗಾಯಕರಾದ ಘಂಟಸಾಲ, ತಮಿಳಿನಲ್ಲಿ ಟಿ.ಎಂ.ಸೌಂದರರಾಜನ್ & ಕನ್ನಡದಲ್ಲಿ ಪಿ.ಬಿ.ಶ್ರೀನಿವಾಸ್ ಅವರೊಂದಿಗಿನ ಅವರ ಯುಗಳ ಗೀತೆಗಳು ಹಾಡಿ ದಕ್ಷಿಣ ಭಾರತದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದಲ್ಲಿ ‘ವಿರಹ ನೂರು ನೂರು ತರಹ’ ಸೇರಿದಂತೆ ಹಲವಾರು ಹಾಡುಗಳನ್ನು ಹಾಡಿದ್ದಾರೆ.