ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠ ಬಂಟ್ವಾಳ ಮಂಡಲದ ಸದಸ್ಯ ಪ್ರಶಾಂತ್ ನಾಯ್ಕ್ ಆತ್ಮಹತ್ಯೆ

Share with

bjp

ಬಂಟ್ವಾಳ : ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠ ಬಂಟ್ವಾಳ ಮಂಡಲದ ಸದಸ್ಯ, ಪೆರಾಜೆ ಭಾಗದ ಸಕ್ರಿಯ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪದ ಪೆರಾಜೆ ಎಂಬಲ್ಲಿ ನಡೆದಿದೆ.
ಬಿಜೆಪಿ ಸಕ್ರಿಯ ಕಾರ್ಯಕರ್ತ ಪ್ರಶಾಂತ್ ನಾಯ್ಕ ಮೃತ ಯುವಕ. ಆ.16ರಂದು ರಾತ್ರಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಪ್ರಶಾಂತ್ ನೇರಳಕಟ್ಟೆಯಲ್ಲಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಒಂದು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಸದಾ ನಗುಮೊಗದ ಪ್ರಶಾಂತ್ ಎಲ್ಲರೊಂದಿಗೆ ಸ್ನೇಹದಿಂದಿದ್ದರು. ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದ ಅವರು ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದು, ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಅವರು ಪ್ರಸ್ತುತ ಸದಸ್ಯರಾಗಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


Share with

Leave a Reply

Your email address will not be published. Required fields are marked *