ಶಾಲೆ, ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆ ಓದಬೇಕು ಅನ್ನುವ ನಿಯಮವನ್ನು ಸರ್ಕಾರ ಕಡ್ಡಾಯ ಮಾಡಿ ಆದೇಶಿಸಿದೆ.
ಸೆಪ್ಟೆಂಬರ್ 15ರಿಂದ ಈ ಆದೇಶ ಜಾರಿಯಾಗಲಿದ್ದು, ಸರ್ಕಾರಿ ಕಚೇರಿಗಳಲ್ಲಿ ನಡೆಸುವ ಸಭೆ, ಸಮಾರಂಭಕ್ಕೂ ಮುನ್ನ ಪೀಠಿಕೆ ಓದಲೇಬೇಕು ಎಂದು ಕಡ್ಡಾಯಗೊಳಿಸಲಾಗಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ರಾಜ್ಯಸರ್ಕಾರ ಸೆಪ್ಟೆಂಬರ್ 15ರಂದು ವಿಶೇಷ ಕಾರ್ಯಕ್ರಮವನ್ನು ಕೂಡ ವಿಧಾನಸೌಧದಲ್ಲಿ ಹಮ್ಮಿಕೊಂಡಿದೆ.