
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಆಡಿ ಗಮನಸೆಳೆದರು.

ರಾಷ್ಟ್ರಪತಿ ಮುರ್ಮು ಮತ್ತು ಸೈನಾ ನಡುವಿನ ಸೌಹಾರ್ದ ಪಂದ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು ಜೊತೆಗೆ ಮೆಚ್ಚುಗೆಯೂ ವ್ಯಕ್ತವಾಗಿದೆ.
ಸೈನಾ ಜೊತೆ ಬ್ಯಾಡ್ಮಿಂಟನ್ ಆಡಿದ ಕುರಿತ ಫೋಟೋಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ x ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅಧ್ಯಕ್ಷೆ ದ್ರೌಪದಿ ಮುರ್ಮು ಅವರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿರುವ ಫೋಟೋವನ್ನು ಸೈನಾ ನೆಹ್ವಾಲ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದಾರೆ ಮತ್ತು ಇದು ನನ್ನ ಜೀವನದ ಸ್ಮರಣೀಯ ದಿನ, ಈ ದಿನವನ್ನು ನಾನು ಇಂದಿಗೂ ಮರೆಯುವುದಿಲ್ಲ ನನ್ನೊಂದಿಗೆ ಬ್ಯಾಡ್ಮಿಂಟನ್ ಆಡಿದ್ದಕ್ಕಾಗಿ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.




