ಯೋಗದ ಜಾಗತಿಕ ಕೀರ್ತಿಗೆ ಭಾರತದ ಕೊಡುಗೆ ಅಪಾರ – ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ನ.13) ಬೆಂಗಳೂರಿನ ಜಿಗಣಿಯಲ್ಲಿರುವ ಪ್ರಶಾಂತಿ ಕುಟೀರಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥೆ (S-VYASA)ಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸಂಸ್ಥೆಯ 50 ವರ್ಷಗಳ ಸಾಧನೆಯ ಸಂಭ್ರಮ ಹಾಗೂ ಸಾಹಿತಿ ಎಚ್.ವಿ. ಶೇಷಾದ್ರಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಪ್ರಧಾನಿ ಮೋದಿ ಅವರು ಸುವರ್ಣ ಮಹೋತ್ಸವ ಆಡಳಿತ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇರಳದ ತಿರುವನಂತಪುರಂನಲ್ಲಿ ಎಸ್-ವ್ಯಾಸ ಸಂಸ್ಥೆಯ ನೂತನ ಕ್ಯಾಂಪಸ್ಗೂ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲೆ ಸುಧಾ ಯಾದವ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯೋಗ ಕ್ಷೇತ್ರದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಮಹತ್ವದ ಕೊಡುಗೆ ನೀಡುತ್ತಿದೆ. ಇಂದು ವಿಶ್ವದ ಅನೇಕ ರಾಷ್ಟ್ರಗಳು ಭಾರತದ ಯೋಗ ಪರಂಪರೆಯನ್ನು ಗೌರವಿಸುತ್ತಿವೆ. ಯೋಗವು ಜಗತ್ತಿಗೆ ಭಾರತದ ಹೆಮ್ಮೆಯ ಗುರುತಾಗಿದೆ ಎಂದು ಹೇಳಿದರು.
ಇದೇ ವೇಳೆ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲೂ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.




