ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

Share with

ಖಾಸಗಿ ಬಸ್ಸೊಂದು ಡಿವೈಡರ್‌ಗೆ ತಾಗಿ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಕುಂದಾಪುರ: ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಎಂಬಲ್ಲಿ ಖಾಸಗಿ ಬಸ್ಸೊಂದು ಡಿವೈಡರ್‌ಗೆ ತಾಗಿ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಅ.18ರಂದು ಸಂಜೆ ಸಂಭವಿಸಿದೆ. ಕುಂದಾಪುರದಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಬಸ್ ಚಾಲಕನ ವೇಗದ ಹಾಗೂ ನಿರ್ಲಕ್ಷ್ಯತನದ ಚಾಲನೆಯಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಹಾನಿ ಸಂಭವಿಸಿಲ್ಲ. ಗಂಗೊಳ್ಳಿ ಎಸ್ ಐ ಹರೀಶ್ ಆರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಹಾಗೂ ಹೆದ್ದಾರಿಯ ವಾಹನ ದಟ್ಟಣೆ ನಿವಾರಿಸುವಲ್ಲಿ ನೆರವಾದರು ಎಂದು ತಿಳಿದುಬಂದಿದೆ.


Share with

Leave a Reply

Your email address will not be published. Required fields are marked *