ಉಡುಪಿ: ಖಾಸಗಿ ಸೊಸೈಟಿಯೊಂದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಅಂಬಲಪಾಡಿ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಮೃತರನ್ನು ಸಚಿನ್ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಅವರು ಉಡುಪಿಯ ಖಾಸಗಿ ಸೊಸೈಟಿಯೊಂದರಲ್ಲಿ ಕಳೆದ ನಾಲ್ಕು ವರ್ಷಗಳಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (CEO) ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅಪಾರ್ಟ್‌ಮೆಂಟ್‌ನಲ್ಲಿ ಸಚಿನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಘಟನೆಯ ಮಾಹಿತಿ ದೊರೆತ ಬಳಿಕ ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.




