
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ೧೬ ಪೊಲೀಸ್ ಸಹಾಯಕ ಉಪ ನೀರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಆದೇಶ ಹೊರಡಿಸಿದ್ದಾರೆ.
ಪಿಎಸ್‌ಐಗಳಾಗಿ ಭಡ್ತಿ ಪಡೆದಿರುವವರನ್ನು ವಿವಿಧ ಠಾಣೆಗಳಿಗೆ ನಿಯೋಜಿಸಲಾಗಿದೆ. ಪಿಎಸ್‌ಐ ಆಗಿ ಭಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಅವರು ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ್ ಅವರು ಸುರತ್ಕಲ್ ಪೊಲೀಸ್ ಠಾಣೆಗೆ, ಸಿಎಸ್‌ಪಿಯ ಆನಂದ ಬಿ. ಅವರು ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಅವರು ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಅವರು ಕದ್ರಿ ಸಂಚಾರ ಠಾಣೆಗೆ, ಕದ್ರಿ ಠಾಣೆಯ ಶಾಂತಪ್ಪ ಜಿ. ಅವರು ಕಂಕನಾಡಿ ನಗರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಕೃಷ್ಣಪ್ಪ ಅವರು ಮೂಡುಬಿದಿರೆ ಠಾಣೆಗೆ, ಉತ್ತರ ಠಾಣೆಯ ಶಿವಪ್ಪ ಗೌಡ ಅವರು ಅದೇ ಠಾಣೆಗೆ, ಉರ್ವ ಠಾಣೆಯ ಉಲ್ಲಾಸ್ ಪಾಂಡುರಂಗ ಅವರು ಬರ್ಕೆ ಠಾಣೆಗೆ, ಉತ್ತರ ಠಾಣೆಯ ಓಂ ದಾಸ್ ಅವರು ಸೆನ್ ಠಾಣೆಗೆ, ಐಎಸ್‌ಡಿಯ ರವಳೇಂದ್ರ ಅವರು ಗ್ರಾಮಾಂತರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಶಶಿಧರ ಶೆಟ್ಟಿ ಅವರು ಸುರತ್ಕಲ್ ಠಾಣೆಗೆ, ಉಳ್ಳಾಲ ಠಾಣೆಯ ಪ್ರಾಣೇಶ್ ಕುಮಾರ್ ಬಿ. ಅವರು ಅದೇ ಠಾಣೆಗೆ, ಸೆನ್ ಠಾಣೆಯ ಮೋಹನ್ ಅವರು ಅದೇ ಠಾಣೆಗೆ, ಸಿಸಿಬಿಯ ಹರೀಶ್ ಪದವಿನಂಗಡಿ ಸಿಎಸ್‌ಬಿಗೆ, ದಕ್ಷಿಣ ಠಾಣೆಯ ಪುರಂದರ ಬಿ.ಪಿ ಅವರು ಸಿಸಿಆರ್‌ಬಿಗೆ ಪಿಎಸ್‌ಐ ಹುದ್ದೆಗೆ ನೇಮಕ ಮಾಡಿ ವರ್ಗಾಯಿಸಲಾಗಿದೆ.