ಮಂಗಳೂರು: ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಫೆ.25 ರಂದುನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದು, ಈ ಪ್ರಕರಣ ಕುರಿತಂತೆ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದೆ.

ಹೈಕೋರ್ಟ್ ದ್ವಿಸದಸ್ಯ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ಮಾಡಲಾಗಿದ್ದು ಮಾರ್ಚ್ 12 ರ ಒಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಪೊಲೀಸರಿಗೆ ಆದೇಶಿಸಲಾಗಿದೆ. ಮಾರ್ಚ್ 13 ಕ್ಕೆ ವಿಚಾರಣೆ ಮುಂದೂಡಲಾಗಿದೆ.ಫೆ.25 ರ ಸಂಜೆ ನಾಪತ್ತೆಯಾಗಿದ್ದ ದಿಗಂತ್, ಫರಂಗಿಪೇಟೆ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿ ಬರುವುದಾಗಿ ಹೇಳಿದ್ದ. ಅತ್ತ ದೇವಸ್ಥಾನಕ್ಕೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದ. ಅನಂತರ ಫರಂಗಿಪೇಟೆಯಲ್ಲಿ ರೈಲ್ವೆ ಹಳಿಯಲ್ಲಿ ಚಪ್ಪಲಿ, ಮೊಬೈಲ್ ಪತ್ತೆಯಾಗಿತ್ತು.




