ಬಂಟ್ವಾಳ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತ ಬಂಟ್ವಾಳ ನಂ.೧ ಹಾಗೂ ನಂ.೨ ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಂಟ್ವಾಳ ಉಪವಿಭಾಗ ಕಚೇರಿಯಲ್ಲಿ ಸೆ.೨೦ ರಂದು ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಜನಸಂಪರ್ಕ ಸಭೆಯಲ್ಲಿ ಸುಮಾರು ೧೦ ದೂರುಗಳು ಸಾರ್ವಜನಿಕರಿಂದ ಬಂದಿದ್ದು, ಪ್ರತಿಯೊಂದು ಸಮಸ್ಯೆಗಳಿಗೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದರು.
ಸಾರ್ವಜನಿಕರ ಎಲ್ಲಾ ಸಮಸ್ಯೆಗಳನ್ನು ಆಲಿಸಿದ ಅಧಿಕಾರಿಗಳು ಸಮಸ್ಯೆಗಳ ಪರಿಹಾರಕ್ಕೆ ಬೇಕಾಗುವ ಅಂದಾಜು ಪಟ್ಟಿಯನ್ನು ತಯಾರಿಸಿ ಇಲಾಖೆಯ ಸೂಚನೆ ಮೇರೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಸಭೆಯಲ್ಲಿ ಕಾರ್ಯಪಾಲಕ ಇಂಜಿನಿಯರ್ ವೆಂಕಟೇಶ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಾರಾಯಣ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.