ವಿಟ್ಲ ನೆತ್ರಕೆರೆ ಅಂಗನವಾಡಿಯಿಂದಪೌಷ್ಟಿಕ ಆಹಾರ ಚೀಲ, ಗ್ಯಾಸ್ ಸಿಲಿಂಡರ್ ಕಳವು

Share with

ವಿಟ್ಲ: ವಿಟ್ಲದ ನೆತ್ರಕೆರೆ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಮತ್ತು ಪುಟಾಣಿಗಳಿಗಾಗಿ ತಂದಿರಿಸಿದ್ದ ಪೌಷ್ಟಿಕ ಆಹಾರ ಸಾಮಗ್ರಿ ಮತ್ತು ಗ್ಯಾಸ್ ಸಿಲಿಂಡರ್, ರೆಗ್ಯುಲೇಟರ್ ಇತ್ಯಾದಿಗಳನ್ನು ಕಳವುಗೈಯಲಾಗಿದೆ. ತೂಕದ ಯಂತ್ರ, ಗ್ಯಾಸ್ ಸಿಲಿಂಡರ್ ಮತ್ತು ಪೌಷ್ಟಿಕ ಆಹಾರ ಸೇರಿ ಒಟ್ಟು 50,000/- ರೂ.ಗಳಿಗೂ ಅಧಿಕ ಮೌಲ್ಯದ ಸಾಮಗ್ರಿಗಳನ್ನು ಕಳವುಗೈಯಲಾಗಿದೆ ಎಂದು ಅಂಗನವಾಡಿ ಮೇಲ್ವಿಚಾರಕಿ ಲತಾ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *