ಪುತ್ತೂರು: ಪುರುಷರಕಟ್ಟೆಯಲ್ಲಿ ಬಸ್ – ಬೈಕ್ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Share with

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 10ರಂದು ನಡೆದಿದೆ.

ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ಮೋಕ್ಷಿತ್ (23ವ) ಅಪಘಾತದಲ್ಲಿ ಮೃತಪಟ್ಟ ಯುವಕ.

ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಸವಾರ ಮೋಕ್ಷಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೆಳಗ್ಗಿನ ಜಾವ ಬೈಕನ್ನು ಸರ್ವಿಸ್ ಸ್ಟೇಷನ್ ಗೆ ಹೋಗಿ ಹಿಂತಿರುಗಿ ಬರುವಾಗ ಅಲ್ಲಿಯೇ 100ಮೀಟರ್ ಅಂತರದಲ್ಲಿ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಯುವಕನ ತಂದೆ ಆನಂದ ಗೌಡ ಪುತ್ತೂರಿನ ಸಂಚಾರಿ ಠಾಣೆಯಲ್ಲಿ ದೂರು ನೀಡಿದ್ದಾರೆ.


Share with

Leave a Reply

Your email address will not be published. Required fields are marked *