ಪುತ್ತೂರು: ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಪುತ್ತೂರು ತಾಲೂಕು ಬಿಲ್ಲವ ಮಹಿಳಾ ವೇದಿಕೆ ಇದರ ಆಶ್ರಯದಲ್ಲಿ ಆ.16ರಂದು ಶುಕ್ರವಾರ ಬೆಳಿಗ್ಗೆ ಗಂಟೆ 9.00ಕ್ಕೆ ಪುತ್ತೂರು “ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನ”ದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಲಿದೆ.
ಬೆಳಿಗ್ಗೆ 11.00 ಗಂಟೆಗೆ ಮಹಿಳಾ ವೇದಿಕೆಯ ಸದಸ್ಯೆಯರಿಂದ ಭಜನೆ , ಮಧ್ಯಾಹ್ನ 12.00 ಗಂಟೆಗೆ ಮಹಾಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ನೆರವೇರಲಿದೆ ಎಂದು ತಾಲೂಕು ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷರು ಹಾಗೂ ಸರ್ವಸದಸ್ಯರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.