ಪುತ್ತೂರು: ಬೆಟ್ಟಂಪಾಡಿಯಲ್ಲಿ ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.


ಮೃತಪಟ್ಟ ವ್ಯಕ್ತಿಯನ್ನು ನಿಡ್ನಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45) ಎಂದು ಗುರುತಿಸಲಾಗಿದ್ದು, ಇವರು ಬೆಟ್ಟಂಪಾಡಿ ಸಮೀಪದ ಕೃಷಿಕರೊಬ್ಬರ ಮನೆಗೆ ಅಡಿಕೆ ಕೊಯ್ಯಲು ಹೋಗಿದ್ದರು. ಅಡಿಕೆ ಕೊಯ್ಯುವಾಗ ಕಾಲು ಜಾರಿ ಮರದಿಂದ ಕೆಳಗೆ ಬಿದ್ದ ಇವರನ್ನು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಅಲ್ಲಿ ತಲುಪುವ ವೇಳೆ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.




