ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಧ್ವನಿಯೆತ್ತಿದ ಪುತ್ತೂರು ಶಾಸಕ ಅಶೋಕ್ ರೈ

Share with

ಪುತ್ತೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ವಕ್ಫ್ ನೀತಿ ಕರ್ನಾಟಕದಲ್ಲಿ ಜಾರಿಯಾಗುವುದಿಲ್ಲ, ಧಾರ್ಮಿಕ ಮುಖಂಡರುಗಳ ಜೊತೆ ಚರ್ಚೆ ಮಾಡದೆ ಬಿಲ್ ಪಾಸ್ ಮಾಡಿರುವುದು ಖಂಡನೀಯ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಹಲವು ಸಂಘಟನೆಗಳು ಈಗಾಗಲೇ ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ನ್ಯಾಯಾಲಯದಲ್ಲಿ ಜಯ ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ. ಯಾವುದೇ ಮಸೂದೆ ಜಾರಿಗೆ ತರುವುದಿದ್ದರೂ ಆ ಧರ್ಮದವರ ಜೊತೆ ಮಾತುಕತೆ ನಡೆಸಿ ಒಪ್ಪಿಗೆಯಿದ್ದರೆ ಮಾತ್ರ ಜಾರಿಗೆ ತರಬೇಕು, ಧರ್ಮದವರ ವಿರೋಧ ಇದ್ದರೂ ಜಾರಿಗೆ ತರುವುದು ಸರಿಯಲ್ಲ ಎಂದ ಅವರು ಇದು ರಾಜ್ಯದಲ್ಲಿ ಜಾರಿಯಾಗುವುದಿಲ್ಲ ಎಂದು ತಿಳಿಸಿದರು


Share with

Leave a Reply

Your email address will not be published. Required fields are marked *