
ಪುತ್ತೂರು : ಹೊಸ ರಿಕ್ಷಾವೊಂದು ನಿಯಂತ್ರಣ ತಪ್ಪಿ ಗುಂಡಿಗೆ ಪಲ್ಟಿಯಾಗಿ ಬಿದ್ದ ಘಟನೆಪುತ್ತೂರಿನ ಸಾಲ್ಮರದ ಕೊಟೇಚಾ ಹಾಲ್ ಬಳಿ ನಡೆದಿದೆ.
ಹೊಸ ರಿಕ್ಷಾ ಖರೀದಿ ಹಿನ್ನೆಲೆ ವ್ಯಕ್ತಿ ಚಲಾವಣೆ ಕಲಿಯುತ್ತಿದ್ದ ಸಮಯದಲ್ಲಿ ರಿಕ್ಷಾ ಪಲ್ಟಿಯಾಗಿದೆ ಎನ್ನಲಾಗಿದೆ. ರಿಕ್ಷಾಕ್ಕೆ ಹಾನಿಯಾಗಿದೆ. ಚಾಲಕ ಮತ್ತು ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ.