ಪುತ್ತೂರಿನಲ್ಲಿ ನಡೆದ ದರೋಡೆ ಪ್ರಕರಣ: ಆರು ಮಂದಿ ಬಂಧನ

Share with

ಪೊಲೀಸರು ಕೇರಳ ಮೂಲದ ಐವರು ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದ್ದಾರೆ.

ಪುತ್ತೂರು: ಸೆ.6 ರಂದು ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ಎಂಬಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಕೇರಳ ಮೂಲದ ಐವರು ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿ, ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ.

ಕೇರಳ ಮೂಲದ ಐವರು ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿ, ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಪುತ್ತೂರು ಎಎಸ್‌ಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರಕರಣವನ್ನು ಭೇದಿಸಿದ ಬಗ್ಗೆ ಮಾಹಿತಿಯನ್ನು ನೀಡಿದರು. ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪೆರುವಾಯಿ ಗ್ರಾಮದ ಕಿಣಿಯರ ಪಾಲು ನಿವಾಸಿ ಸುಧೀರ್(38), ಕೇರಳ ರಾಜ್ಯದ ಕಾಸರಗೋಡು ಪೈವಳಿಕೆ ಸಮೀಪದ ಮಂಜೇಶ್ವರ ಗ್ರಾಮದ ಅಟ್ಟೆಗೋಳಿ ಮಂಜಳ್ತೋಡಿ ನಿವಾಸಿ ಕಿರಣ್ ಟಿ (29), ಕಾಂಞಗಾಡ್ ಸಮೀಪದ ಮೂವರಿಕುಂಡ ಕಂಡತ್ತೀಲ್ ವೀಡು ನಿವಾಸಿ ಸನಾಲ್ ಕೆ.ವಿ ( 34), ಎಡನಾಡು ಗ್ರಾಮದ ಮುಗು ಸೀತಂಗೋಳಿ ರಾಜೀವ ಗಾಂಧಿ ಕಾಲೋನಿ ನಿವಾಸಿ ಮಹಮ್ಮದ್ ಫೈಝಲ್ (37), ಅಬ್ದುಲ್ ನಿಝಾರ್ (21) ಮತ್ತು ಮಂಜೇಶ್ವರ ತಾಲೂಕಿನ ಶೇಣಿ ಗ್ರಾಮದ ಹೊಸಗದ್ದೆ ನಿವಾಸಿ ವಸಂತ ಎಂ (31) ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಾದ ಕಿರಣ್ ಟಿ, ಸುಧೀರ್ ಕುಮಾರ್ ಮಣಿಯಾಣಿ, ಸನಾಲ್ ಕೆ.ವಿ ಎಂಬವರನ್ನು ಗುರುವಾರ ರಾತ್ರಿ ಪುತ್ತೂರು ತಾಲೂಕಿನ ನಿಡ್ಪಳ್ಳಿಯಲ್ಲಿ ಬಂಧಿಸಲಾಗಿದ್ದು, ಉಳಿದಂತೆ ಮಹಮ್ಮದ್ ಫೈಝಲ್, ಅಬ್ದುಲ್ ನಿಝಾರ್ ಮತ್ತು ವಸಂತ ಎಂಬವರನ್ನು ಶುಕ್ರವಾರ ಕಾಸರಗೋಡು ಜಿಲ್ಲೆಯ ಮುನಿಯಂಪಾಲ ಎಂಬಲ್ಲಿ ಬಂಧಿಸಲಾಗಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಆಲ್ಟೋ ಕಾರು, ಮಾರಕಾಸ್ತ್ರಗಳು, ಬೈಕ್ ಹಾಗೂ ದರೋಡೆ ಮಾಡಿರುವ ಚಿನ್ನದ ಬಳೆ, ಸರ, ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್‌ಪಿ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ರವಿ ಅವರನ್ನು ಒಳಗೊಂಡ ತಂಡವನ್ನು ಮಾಡಿ ಪತ್ತೆಗೆ ಪ್ರಯತ್ನ ನಡೆಸಲಾಗಿತ್ತು. ಅವರು ತುಂಬಾ ಶ್ರಮ ವಹಿಸಿ ಪತ್ತೆ ಹಚ್ಚಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡಕ್ಕೆ ನಗದು ಬಹುಮಾನ ಮತ್ತು ಉತ್ತಮ ಸೇವಾ ಪತ್ರ ನೀಡಿ ಗೌರವಿಸಲಾಗುವುದು ಎಂದು ಎಸ್‌ಪಿ ಅವರು ತಿಳಿಸಿದರು.

ಈ ಪ್ರಕರಣದ ಕಾರ್ಯಾಚರಣೆಯು ಜಿಲ್ಲಾ ಎಸ್‌ಪಿ ಸಿ.ಬಿ ರಿಷ್ಯಂತ್, ಹೆಚ್ಚುವರಿ ಎಸ್.ಪಿ ಧರ್ಮಪ್ಪ ಎನ್.ಎಂ ಅವರ ನಿರ್ದೇಶನ ಮತ್ತು ಪುತ್ತೂರು ಡಿವೈಎಸ್ಪಿ ಡಾ|ಗಾನ ಪಿ.ಕುಮಾರ್ ಅವರ ಮಾರ್ಗದರ್ಶನದಲ್ಲಿ ದರೋಡೆ ಪ್ರಕರಣದ ಪತ್ತೆಗಾಗಿ ರಚಿಸಲಾಗಿದ್ದ ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ರವಿ ಬಿ.ಎಸ್ ಅವರ ನೇತೃತ್ವದ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯ ಎಸ್‌ಐ ಉದಯರವಿ ಎಂ.ವೈ, ಸಂಪ್ಯ ಠಾಣೆಯ ಎಸ್‌ಐ ಧನಂಜಯ ಬಿ.ಸಿ, ಉಪ್ಪಿನಂಗಡಿ ಠಾಣೆಯ ಎಸ್‌ಐ ರುಕ್ಮ ನಾಯ್ಕ್ ಅವರನ್ನೊಳಗೊಂಡ ವಿಶೇಷ ಪೊಲೀಸ್ ತಂಡ ಆರೋಪಿಗಳನ್ನು ಪತ್ತೆಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.


Share with

Leave a Reply

Your email address will not be published. Required fields are marked *