ಪುತ್ತೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮಲಗಿದ್ದಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪ ನಡೆದಿದೆ.
ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಿವಾಸಿ ಉದ್ಯಮಿ ದಾವೂದ್ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಹಫೀಜಾ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈಕೆ ಬುಧವಾರ ತಡರಾತ್ರಿವರೆಗೂ ಅಭ್ಯಾಸ ಮಾಡುತ್ತಿದ್ದರು. ಆದರೆ ಗುರುವಾರ ಮುಂಜಾನೆ ಮನೆಯವರು ಎಬ್ಬಿಸಲು ಹೋದಾಗ ಆಕೆ ಮಲಗಿದಲ್ಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.