ಬೆಂಗಳೂರು: ಬಿಜೆಪಿಯಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಕೊನೆಗೂ ಅಂತಿಮವಾಗಿದೆ. ಮಾಜಿ ಡಿಸಿಎಂ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕ ಎಂದು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಆಯ್ಕೆಯನ್ನು ಮಾಡಲಾಗಿದೆ. ಕೇಂದ್ರದಿಂದ ಆಗಮಿಸಿದ್ದ ಬಿಜೆಪಿ ವೀಕ್ಷಕರಾದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ದುಷ್ಯಂತ್ ಕುಮಾರ್ ಗೌತಮ್ ಅವರು ಶಾಸಕರ ಅಭಿಪ್ರಾಯವನ್ನು ಪಡೆದು ಒಮ್ಮತದ ತೀರ್ಮಾನ ಎಂದು ಪ್ರತಿಪಕ್ಷ ನಾಯಕರನ್ನಾಗಿ ಆರ್. ಅಶೋಕ್ ಹೆಸರನ್ನು ಘೋಷಣೆ ಮಾಡಿದ್ದಾರೆ.