ಜೂನಿಯರ್ ವಿದ್ಯಾರ್ಥಿಗಳನ್ನು ರ್ಯಾಗಿಂಗ್ ಮಾಡಿದ & ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದಡಿ 22 ಕಾಲೇಜು ವಿದ್ಯಾರ್ಥಿಗಳು & ಹೊರಗಿನ ವ್ಯಕ್ತಿಯ ವಿರುದ್ಧ FIR ದಾಖಲಿಸಲಾಗಿದೆ. ಈ ಘಟನೆ ಸಂಬಂಧ ದೇವನಹಳ್ಳಿಯ ಆಕಾಶ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಪ್ರವೇಶ ವಿಭಾಗದ ಮುಖ್ಯಸ್ಥ ಮಿಧುನ್ ಮಾಧವನ್ ದೂರು ನೀಡಿದ್ದರು.

ಈ ದೂರಿನ ಆಧಾರದ ಮೇಲೆ ಜ. 16 ರಂದು ದಾಖಲಾಗಿತ್ತು. ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




