ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಜರ್ಮನಿಗೆ ಭೇಟಿ ನೀಡಿದ್ದ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರು. ಇದನ್ನು ಉಲ್ಲೇಖಿಸಿ ಮಾತನಾಡಿರುವ ಶೋಭಾ, ‘ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಲ್ಲ, ಬದಲಾಗಿ ವಿದೇಶಕ್ಕೆ ಹೋಗಿ ರಾಷ್ಟ್ರದ ವಿರುದ್ಧ ಮಾತನಾಡುವ ಭಾರತ ವಿರೋಧಿ ನಾಯಕ.

ಹೀಗೆ ಮಾಡುವುದರಿಂದ ಅವರು ಏನು ಗಳಿಸಲು ಬಯಸುತ್ತಾರೆ? ಅವರು ಇನ್ನೂ ಮಗುವಿನಂತೆ ವರ್ತಿಸುತ್ತಾರೆ, ನಾಯಕನಂತೆ ಅಲ್ಲ’ ಎಂದು ದೂರಿದ್ದಾರೆ.




