ಕೊಂಕಣ ರೈಲ್ವೆ ಇಂಜಿನಿಯರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಬೆಳಕೆ ಸೊಸೈಟಿಯ ಹತ್ತಿರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗಟಾರಕ್ಕೆ ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ.
ಬೈಂದೂರು ಬಾಡ ನಿವಾಸಿ ಗಣಪಯ್ಯ ಶೇರುಗಾರ ಅವರ ಪುತ್ರ ಸಂಜಯ ಕುಮಾರ (52) ಎಂದು ಗುರುತಿಸಲಾಗಿದೆ.
ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.